ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ - ಅಪಾರ ಪ್ರಮಾಣದ ಮಳೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16650544-thumbnail-3x2-ggg.jpg)
ತುಮಕೂರು ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಅಪಾರ ಪ್ರಮಾಣದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊರಟಗೆರೆ, ಮಧುಗಿರಿ, ಗುಬ್ಬಿ, ಕುಣಿಗಲ್, ತಿಪಟೂರು ತಾಲೂಕಿನ ವ್ಯಾಪ್ತಿಯಲ್ಲಿ ಸಾಕಷ್ಟು ಮಳೆಯಾಗಿದ್ದು, ಅಡಕೆ ತೋಟ, ತೆಂಗಿನ ತೋಟಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ಇನ್ನು ಬಹುತೇಕ ಕೆರೆಗಳು ಕೋಡಿ ಬಿದ್ದು ಹರಿಯುತ್ತಿವೆ. ಜನರು ಮಳೆ ನೀರಿನ ನಡುವೆ ಓಡಾಡುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುತ್ತಿದ್ದಾರೆ.
Last Updated : Feb 3, 2023, 8:29 PM IST