ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ವಿರೋಧಿಸುತ್ತದೆ: ಗೃಹ ಸಚಿವ ಡಾ ಜಿ ಪರಮೇಶ್ವರ್

🎬 Watch Now: Feature Video

thumbnail

ತುಮಕೂರು: ದೇಶದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ವಿರೋಧಿಸುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕೊರಟಗೆರೆ ಪಟ್ಟಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅದಕ್ಕೆ ಕೇವಲ ವಿರೋಧಿಸಬೇಕು ಎಂದು ವಿರೋಧಿಸುತ್ತಿಲ್ಲ. ಬದಲಾಗಿ ನಾವು ಇದುವರೆಗೂ ಯಾವ ಶಿಕ್ಷಣ ನೀತಿ  ಅನುಸರಿಸಿದ್ದೇವೆ ಅದು ಹತ್ತನೇ ತರಗತಿ ಮತ್ತು ಎರಡು ವರ್ಷ ಪಿಯುಸಿ ಶಿಕ್ಷಣ ನೀತಿ ಅನ್ವಯ ಶಿಕ್ಷಣ ಪಡೆದಿದ್ದೇವೆ. ಆದರೆ, ಅದನ್ನು ಅನುಸರಿಸಿಕೊಂಡಿರುವ ನಾವು ಸರಿ ಇಲ್ಲವೇ ಎಂದು ಪ್ರಶ್ನಿಸಿದರು.

ಇಂದಿನ ವಿಜ್ಞಾನಿಗಳು ಹಾಗೂ ಸಮಾಜದಲ್ಲಿರುವವರೆಲ್ಲರೂ ಹಳೆಯ ಶಿಕ್ಷಣ ನೀತಿಯಲ್ಲೇ ಓದಿದ್ದಾರೆ.  ಆದರೆ ಇದ್ದಕ್ಕಿದ್ದಂತೆ ನೂತನ ಶಿಕ್ಷಣ ನೀತಿ ಜಾರಿಗೆ ತರುವುದರಲ್ಲಿ ಯಾವ ಅರ್ಥವಿದೆ ಎಂದು ಹೇಳಿದರು. ಪಶ್ಚಿಮಾತ್ಯ ದೇಶಗಳಲ್ಲಿ ಮಕ್ಕಳ ವಿಕಸನಕ್ಕೆ ಪೂರಕವಾಗಿ ಶಿಕ್ಷಣ ನೀತಿಯನ್ನು ಅನುಸರಿಸಲಾಗುತ್ತಿದೆ. ಅದೇ ರೀತಿ ದೇಶದಲ್ಲಿಯೂ ಈ ಹಿಂದೆ ಶಿಕ್ಷಣ ನೀತಿಯನ್ನು ಪೂರಕವಾಗಿ ಮಕ್ಕಳ ವಿಕಸನಕ್ಕೆ ಅಳವಡಿಸಿಕೊಳ್ಳಲಾಗಿತ್ತು. ಹೀಗಾಗಿ ನಮ್ಮ ರಾಜ್ಯದಲ್ಲಿ ಮಕ್ಕಳ ವಿಕಸನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಅನುಸರಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಎನ್​ಇಪಿ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.