ಡಿಕೆ ಶಿವಕುಮಾರ್ ಸಿಎಂ ಆಗಲ್ಲ ಎಂದು ಹೇಳಿಲ್ಲ.. ಮಾಧ್ಯಮಗಳಲ್ಲಿ ವರದಿಯಾಗಿದ್ದು ಸುಳ್ಳು ಸುದ್ದಿ: ಸಿದ್ದರಾಮಯ್ಯ ಸ್ಪಷ್ಟನೆ
🎬 Watch Now: Feature Video
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎನ್ನಲಾದ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ತಮ್ಮ ಮಾತಿನ ಬಗ್ಗೆ ಸ್ಪಷ್ಟನೆ ನೀಡಿರುವ ಈ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಅವರು, "ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ ಎಂದು ನಾನು ಹೇಳಿಲ್ಲ. ಅವರು ಮತ್ತು ನಾನು ಇಬ್ಬರೂ ಸಿಎಂ ಆಕಾಂಕ್ಷಿಗಳಾಗಿದ್ದೇವೆ ಎಂದು ಹೇಳಿದ್ದೆ. ಉಳಿದೆಲ್ಲವನ್ನು ತಿರುಚಲಾಗಿದೆ. ಇದು ಸಂಪೂರ್ಣ ಸುಳ್ಳು ಸುದ್ದಿ" ಎಂದು ಸ್ಪಷ್ಟಪಡಿಸಿದರು. ಡಿಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಸಿಎಂ ಆಗಿ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾಗಿ ಖಾಸಗಿ ಮಾಧ್ಯಮವೊಂದು ಸುದ್ದಿ ಬಿತ್ತರಿಸಿತ್ತು. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಉತ್ತರ ನೀಡಿದರು.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಗೆ ಹಾಜರಾಗುವುದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕರು, "ಪ್ರಜಾಪ್ರಭುತ್ವದ ಮಾದರಿಯಲ್ಲಿ ಎಲ್ಲರೂ ಆಯ್ಕೆಯಾಗಲಿದ್ದಾರೆ. ನನ್ನ ಹೇಳಿಕೆಯನ್ನೇ ಬದಲಿಸಲಾಗಿದೆ. ಡಿಕೆಶಿ ಮತ್ತು ನಾನು ಇಬ್ಬರೂ ಸಿಎಂ ಅಭ್ಯರ್ಥಿಗಳು ಹೌದು ಎಂದಿದ್ದೆ. ಉಳಿದೆಲ್ಲವೂ ಸುಳ್ಳು ಸುದ್ದಿ" ಎಂದರು.
ಓದಿ: ಭ್ರಷ್ಟರನ್ನು ಯಾರು ರಕ್ಷಿಸುತ್ತಿದ್ದಾರೆ?: ಪ್ರಧಾನಿಗೆ ಕಪಿಲ್ ಸಿಬಲ್ ತಿರುಗೇಟು