ಹಾಸನ: ಕೆರೆಗೆ ಹಾರಿ ಪತ್ನಿ ಆತ್ಮಹತ್ಯೆ, ರಕ್ಷಿಸಲು ಹೋದ ಪತಿಯೂ ಸಾವು - Wife commits suicide by jumping into lake
🎬 Watch Now: Feature Video
Published : Dec 26, 2023, 7:49 PM IST
ಹಾಸನ: ಕೆರೆಗೆ ಹಾರಿದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಕೂಡ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಹೊರವಲಯದ ಚಿಕ್ಕಕಟ್ಟೆ ಕೆರೆಯಲ್ಲಿ ನಡೆದಿದೆ. ರಿಜ್ವಾನ್ (31) ಹಾಗೂ ಸಮ್ರಿನ್ ಬಾನು (25) ಮೃತಪಟ್ಟಿದ್ದಾರೆ.
ಪತ್ನಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಕಳೆದ ಎರಡು ವರ್ಷಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ದಂಪತಿ ಹಾಸನದ ಇಲಾಯಿ ನಗರದ ನಿವಾಸಿಗಳಾಗಿದ್ದಾರೆ. ನಿನ್ನೆ ಕೂಡ ಗಲಾಟೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ತನ್ನ ದ್ವಿಚಕ್ರ ವಾಹನದಲ್ಲಿ ಬಂದ ಸಮ್ರಿನ್ ಬಾನು ಕೆರೆಗೆ ಹಾರಲು ಯತ್ನಿಸಿದ್ದಾರೆ. ಇದನ್ನು ಕಂಡ ಪತಿ ಆಕೆಯನ್ನು ರಕ್ಷಿಸಲು ಹೋಗಿದ್ದು, ಅವರೂ ಕೂಡ ಸಾವಿಗೀಡಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಮೃತದೇಹಗಳನ್ನು ಹೊರತೆಗೆದರು. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿ ನೂರಾರು ಜನರು ಸೇರಿದ್ದರು.
ಇದನ್ನೂ ನೋಡಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿ ಆಟೋ ಡ್ರೈವರ್ ಮನೆಯಲ್ಲಿ ಆತ್ಮಹತ್ಯೆ