ರಾಮನಗರದಲ್ಲಿ ಕಾಡಾನೆಗಳ ಹಿಂಡು-ವೀಡಿಯೊ - ಅರಣ್ಯ ಇಲಾಖೆ ಸಿಬ್ಬಂದಿ

🎬 Watch Now: Feature Video

thumbnail

By

Published : Jul 2, 2023, 8:35 AM IST

ರಾಮನಗರ: ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿವೆ. ಗ್ರಾಮಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಆನೆಗಳ ಹಿಂಡು ಕಾಣಿಸಿಕೊಂಡಿದೆ. ಕಾವೇರಿ ವನ್ಯಜೀವಿ ವಲಯದಿಂದ ಬಂದಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿ ಕಾಡಾನೆ ಹಿಂಡನ್ನು ಕಾಡಿಗಟ್ಟಿದರು. 

ನಿರಂತರ ಆನೆ ದಾಳಿಯಿಂದ ಕಂಗಾಲಾದ ಇಲ್ಲಿನ ಜನತೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಕಪುರ ತಾಲೂಕಿನ ಗಡಿ ಗ್ರಾಮದಲ್ಲಿ ಆನೆಗಳ ದಾಳಿ ನಡೆಯುತ್ತಲೇ ಇರುತ್ತದೆ. ರೈತರು ಬೆಳೆದ ಬೆಳೆ ಹಾನಿಯಾಗುತ್ತಿದೆ. ಶಾಶ್ವತ ಪರಿಹಾರ ಕಂಡು ಹಿಡಿಯುವಲ್ಲಿ ಇಲಾಖೆ ಎಡವಿದೆ ಎಂದು ಅವರು ದೂರಿದ್ದಾರೆ. 

ಎಲಿಫೆಂಟ್ ಟಾಸ್ಕ್‌ಫೋರ್ಸ್‌ ರಚಿಸಿ ಅರಣ್ಯ ಇಲಾಖೆ ಆದೇಶ: ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚುತ್ತಿದ್ದು ರಾಮನಗರ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಿಶೇಷ ಆನೆ ಕಾರ್ಯಪಡೆ (ಎಲಿಫೆಂಟ್ ಟಾಸ್ಕ್ ಫೋರ್ಸ್) ರಚಿಸಿ ಅರಣ್ಯ ಇಲಾಖೆ ಆದೇಶಿಸಿದೆ. ಈ ಮೂಲಕ ಬೆಳೆ ಹಾನಿ, ಪ್ರಾಣ ಹಾನಿ ತಪ್ಪಿಸುವುದು ಇದರ ಗುರಿಯಾಗಿದೆ.

ಇದನ್ನೂ ಓದಿ: Elephant Task Force: ಕಾಡಾನೆ ದಾಳಿ ತಪ್ಪಿಸಲು ವಿಶೇಷ ಕಾರ್ಯಪಡೆ ರಚನೆ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.