ಗ್ರಾಮಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು: ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ - 20ಕ್ಕೂ ಹೆಚ್ಚು ಕಾಡಾನೆಗಳಿರುವ ಗುಂಪು
🎬 Watch Now: Feature Video
ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಕಾಡಾನೆಗಳು ಆನೇಕಲ್ ಗಡಿಭಾಗದ ಕಾಡಂಚಿನ ಗ್ರಾಮಗಳ ಕಡೆಗೆ ಲಗ್ಗೆ ಇಟ್ಟಿವೆ. ಕಾಡಾನೆಗಳ ಹಿಂಡು ಗ್ರಾಮಗಳ ಕಡೆಗೆ ರಸ್ತೆ ದಾಟಿ ಹೋಗುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ತೆಲಗರಹಳ್ಳಿ, ಕಾಳನಾಯಕನಹಳ್ಳಿ, ವಣಕನಹಳ್ಳಿ ಭಾಗದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷವಾಗಿವೆ. ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ಕಾಣಿಸಿಕೊಂಡಿವೆ. ಕಳೆದೆರಡು ದಿನಗಳಿಂದ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
Last Updated : Feb 3, 2023, 8:36 PM IST