ರಾಮನಗರ: ಗ್ರಾಮಕ್ಕೆ ನುಗ್ಗಿದ 12 ಕಾಡಾನೆಗಳು.. ಜನರಲ್ಲಿ ಹೆಚ್ಚಿದ ಆತಂಕ - ಕಾಡಾನೆಗಳ ಉಪಟಳ
🎬 Watch Now: Feature Video
Published : Dec 23, 2023, 1:22 PM IST
|Updated : Dec 23, 2023, 1:38 PM IST
ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಕನಕಪುರ ತಾಲೂಕಿನ ಕಬ್ಬಾಳು ಗ್ರಾಮಕ್ಕೆ ಬರೋಬ್ಬರಿ 12 ಕಾಡಾನೆಗಳು ನುಗ್ಗಿ ಜನರಲ್ಲಿ ಆತಂಕ ಸೃಸ್ಟಿಸಿವೆ. ಕಾಡಾನೆಗಳು ಜನವಸತಿ ಪ್ರದೇಶದಲ್ಲೇ ತಡರಾತ್ರಿ ಓಡಾಡಿರುವುದು ಕಂಡುಬಂದಿದೆ. ಸದ್ಯ ಕಂಚುಗಾರನಹಳ್ಳಿ ಬಳಿ ಕಾಡಾನೆಗಳು ಬೀಡು ಬಿಟ್ಟಿವೆ.
ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರ ಹಾಕಿದ್ದಾರೆ. ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚಾದರೂ ಕೂಡ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ದೂರಿದ್ದಾರೆ. ಅರಣ್ಯಾಧಿಕಾರಿಗಳು ಮೂರು ತಂಡಗಳ ಮೂಲಕ ಕಾಡಾನೆಗಳನ್ನು ಮತ್ತೆ ಕಾಡಿನತ್ತ ಓಡಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಕಾಡಾನೆ ತುಳಿದು ರೈತರೊಬ್ಬರು ಮೃತಪಟ್ಟಿದ್ದ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ನಡೆದಿತ್ತು. 63 ವರ್ಷದ ತಿಮ್ಮಯ್ಯ ಎಂಬುವರು ಮೃತ ರೈತರಾಗಿದ್ದು, ರೇಷ್ಮೆ ಕೃಷಿ ಮಾಡುತ್ತಿದ್ದರು. ಗ್ರಾಮದ ಪಕ್ಕಕ್ಕೆ ರೇಷ್ಮೆ ಹುಳುವಿನ ಮನೆ ಹೊಂದಿದ್ದ ರೈತ ತಿಮ್ಮಯ್ಯ, ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ತೆರಳಿದ್ದರು. ವಾಪಸ್ ಮನೆಗೆ ಬರುವ ವೇಳೆ ಕಾಡಾನೆ ದಾಳಿ ಮಾಡಿತ್ತು.
ಇದನ್ನೂ ಓದಿ: ಚಿಕ್ಕಮಗಳೂರು: ಕಾಡಾನೆ ದಾಳಿಗೆ ಅಡಕೆ ತೋಟ ನಾಶ