ಬೆಳಗಾವಿ: ವೃದ್ಧನಿಗೆ ಡಿಕ್ಕಿಯಾಗಿ ಬಸ್ ಚಕ್ರದಡಿ ಸಿಲುಕಿದ ಬೈಕ್; ಮಹಿಳೆ ಸಾವು - ಮಹಿಳೆ ಸಾವನ್ನಪ್ಪಿರುವ ಘಟನೆ
🎬 Watch Now: Feature Video
Published : Nov 30, 2023, 2:20 PM IST
ಬೆಳಗಾವಿ: ವೃದ್ಧನಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಧಾರವಾಡ ಮೂಲದ ವಿದ್ಯಾಶ್ರೀ (32) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಮತ್ತು ವಿದ್ಯಾಶ್ರೀ ಎಂಬವರು ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಬಸ್ ನಿಲ್ದಾಣ ಮುಂಭಾಗದಲ್ಲಿ ತಲೆ ಮೇಲೆ ದಿನಸಿ ಹೊತ್ತು ಸಾಗುತ್ತಿದ್ದ ವೃದ್ಧನಿಗೆ ಇವರು ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು ರಸ್ತೆ ಮೇಲೆ ಉರುಳಿದೆ. ಹಿಂಬದಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇವರ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಎರಡು ದಿನಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಪಘಾತದ ಭೀಕರತೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ಇನ್ನೋವಾ ಕಾರಿನಲ್ಲಿ ₹8 ಕೋಟಿ ಪತ್ತೆ; ದಾಖಲೆ ಇಲ್ಲದ ಹಣ ಪೊಲೀಸ್ ವಶಕ್ಕೆ