ಕಡಬದಲ್ಲಿ ತೆಪ್ಪ ಮಗುಚಿ ಮಹಿಳೆ ಸಾವು.. ಈಜಿ ದಡ ಸೇರಿದ ಇಬ್ಬರು ನಾರಿಯರು - ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17553046-thumbnail-3x2-sanju.jpg)
ಕಡಬ(ದಕ್ಷಿಣ ಕನ್ನಡ) : ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ (47) ಮೃತರು. ಕುಮಾರಧಾರ ನದಿಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ ಎಂಬಲ್ಲಿಂದ ದನಗಳಿಗೆ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ಹೊಳೆಯನ್ನು ತೆಪ್ಪದ ಮುಖಾಂತರ ದಾಟುತ್ತಿದ್ದಾಗ ನದಿಯ ಮಧ್ಯಭಾಗಕ್ಕೆ ಬಂದಾಗ ಜೋರಾಗಿ ಗಾಳಿ ಬೀಸಿದ್ದು, ಈ ವೇಳೆ ತೆಪ್ಪ ಮಗುಚಿ ಬಿದ್ದಿದೆ ಎಂದು ತಿಳಿದುಬಂದಿದೆ.
ತೆಪ್ಪದಲ್ಲಿದ್ದ ಇನ್ನಿಬ್ಬರು ಮಹಿಳೆಯರು ಹುಲ್ಲು ತುಂಬಿದ್ದ ಗೋಣಿ ಚೀಲದ ಸಹಾಯದಿಂದ ಈಜಿ ದಡ ಸೇರಿದ್ದಾರೆ. ಆದರೆ, ಗೀತಾ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದು ನೀರಿಗಿಳಿದ ಸ್ಥಳೀಯರು ಹುಡುಕಾಡಿದಾಗ ಅದಾಗಲೇ ಗೀತಾ ಮೃತಪಟ್ಟಿದ್ದರು. ಕಡಬ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮೃತರ ಪತಿ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಕಬ್ಬು ತುಂಬಿದ್ದ ಟ್ರಾಕ್ಟರ್ ಮನೆ ಮೇಲೆ ಪಲ್ಟಿ.. ಸ್ಥಳದಲ್ಲೇ ಅಜ್ಜಿ ಸಾವು, ಐವರಿಗೆ ಗಂಭೀರ ಗಾಯ