ಗಣಿ ಇಲಾಖೆಯ ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿದ ದುಷ್ಕರ್ಮಿಗಳು - ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ
🎬 Watch Now: Feature Video
ಪಾಟ್ನಾ (ಬಿಹಾರ) : ಗಣಿ ಇಲಾಖೆಯ ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಪಾಟ್ನಾ ಜಿಲ್ಲೆಯ ಬಿಹ್ತಾ ಎಂಬಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದ ಕೆಲ ದುಷ್ಕರ್ಮಿಗಳು ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮಹಿಳಾ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ದುಷ್ಕರ್ಮಿಗಳ ಗುಂಪೊಂದು ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ಕೇಳಬಹುದು. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು 3 ಎಫ್ಐಆರ್ ದಾಖಲಿಸಿದ್ದು, ಒಟ್ಟು 44 ಜನರನ್ನು ಬಂಧಿಸಿದ್ದಾರೆ. ಜೊತೆಗೆ ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈ ಪ್ರದೇಶದಲ್ಲಿ ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜಿಲ್ಲಾ ಗಣಿ ಇಲಾಖೆ ಮಹಿಳಾ ಅಧಿಕಾರಿ ಮೇಲೆ ಕೆಲ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿದೆ. ಜಿಲ್ಲಾ ಗಣಿ ಇಲಾಖೆ ಮಹಿಳಾ ಅಧಿಕಾರಿ ಮತ್ತು ಇಬ್ಬರು ಗಣಿ ನಿರೀಕ್ಷಕರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ 44 ಮಂದಿಯನ್ನು ಬಂಧಿಸಲಾಗಿದೆ ಎಂದು ಪಾಟ್ನಾ ಎಸ್ಪಿ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: 150 ಸೀಟ್ ಪಕ್ಕಾ ಎಂದ ಮಲ್ಲಿಕಾರ್ಜುನ್ ಖರ್ಗೆ!