ಸ್ಮಶಾನ ಭೂಮಿ ನೀಡಲು ಒತ್ತಾಯ.. ಮೈಮೇಲೆ ಕೊಳಚೆ ನೀರು ಸುರಿದುಕೊಂಡು ಪ್ರತಿಭಟಿಸಿದ ಮಹಿಳೆ: ವಿಡಿಯೋ ವೈರಲ್ - ಮೈಮೇಲೆ ಕೊಳಚೆ ನೀರು ಸುರಿದುಕೊಂಡು ಪ್ರತಿಭಟಿಸಿದ ಮಹಿಳೆ
🎬 Watch Now: Feature Video
ರಾಯಚೂರು: ಮೈ ಮೇಲೆ ಕೊಳಚೆ ನೀರು ಸುರಿದುಕೊಂಡು ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಸಫಾಯಿ ಕರ್ಮಚಾರಿಗಳಿಗೆ ಪ್ರತ್ಯೇಕ ಸ್ಮಶಾನ ಭೂಮಿ ಒದಗಿಸಬೇಕು ಹಾಗೂ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ನಗರದ ಭಂಗಿಕೋಟದ ಬಳಿಯ ರಾಜ ಕಾಲುವೆಯಲ್ಲಿ ಸಫಾಯಿ ಕರ್ಮಚಾರಿ ಗೀತಾ ಸಿಂಗ್ ಎಂಬುವವರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಈ ವಿಚಾರವಾಗಿ ಈಗಾಗಲೇ ನಗರಸಭೆ ಪೌರಾಯುಕ್ತರಿಗೆ ಹಾಗೂ ಸಂಬಂಧಿಸಿದ ಇಲಾಖೆಯವರಿಗೆ ಮನವಿ ಮಾಡಲಾಗಿದೆ. ಜೂನ್ 19ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ನಗರಕ್ಕೆ ಆಗಮಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿ, ಬೇಡಿಕೆ ಒತ್ತಾಯಿಸುವುದಕ್ಕೆ ಮುಂದಾಗಿದ್ದರು. ಆದರೆ, ಭದ್ರತಾ ಸಿಬ್ಬಂದಿ ನಮ್ಮಗೆ ಸಚಿವರಿಗೆ ಮನವಿ ಪ್ರತ ನೀಡಲು ಅವಕಾಶ ನೀಡಲ್ಲ ಎಂದು ಅವರು ಆರೋಪಿಸಿದ್ದಾರೆ.
ಚರಂಡಿಯಲ್ಲಿ ಇಳಿದು ಪ್ರತಿಭಟನೆ ನಡೆಸಲು ಮುಂದಾಗ ಬೇಡವೆಂದು ತಡೆಯಲು ಪ್ರಯತ್ನಿಸಿದರು. ಆದರೆ, ಪಟ್ಟು ಬಿಡದ ಮಹಿಳೆ ಮೈಮೇಲೆ ಕೊಳಚೆ ನೀರು ಹಾಕಿಕೊಂಡು, ಕಾಲುವೆಯೊಳಗೆ ಪ್ರತಿಭಟನೆ ನಡೆಸಿ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಸರ್ಕಾರಿ ಬಸ್ನಲ್ಲಿ ಸೀಟ್ಗಾಗಿ ನಾರಿಯರ ಕಿತ್ತಾಟ: ವೈರಲ್ ವಿಡಿಯೋ