ಮೋದಿ ಕಾರ್ಯಕ್ರಮದಲ್ಲಿ ಭದ್ರಾವತಿ ಉಕ್ಕಿನ ಕಾರ್ಖಾನೆಗಾಗಿ ಕಾರ್ಮಿಕರ ಪ್ರತಿಭಟನೆ - ಈಟಿವಿ ಭಾರತ ಕನ್ನಡ
🎬 Watch Now: Feature Video

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾದ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಇದೇ ವೇಳೆ ಭದ್ರಾವತಿ ಪಟ್ಟಣದ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕಿನ ಕಾರ್ಖಾನೆಯನ್ನು ಉಳಿಸಬೇಕು ಎಂದು ಕಾರ್ಮಿಕರು ಘೋಷಣೆ ಕೂಗಿದ ಘಟನೆ ನಡೆದಿದೆ. ನಿನ್ನೆ ರಾತ್ರಿಯಿಂದಲೇ ಈ ಸಂಬಂಧ ಪ್ರತಿಭಟನೆ ನಡೆಸುತ್ತಿದ್ದ ಗುತ್ತಿಗೆ ಕಾರ್ಮಿಕ ಸಂಘದ ಪದಾಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೇ ಕಾರ್ಮಿಕರು ಕಾರ್ಖಾನೆಯಿಂದ ವಿಮಾನ ನಿಲ್ದಾಣಕ್ಕೆ ಪಾದಯಾತ್ರೆ ಮಾಡುತ್ತಾರೆ ಎಂದು ಪೊಲೀಸರನ್ನು ನಿಯೋಜಿಸಲಾಗಿತ್ತು.
ಪಾದಯಾತ್ರೆಗೆ ಮುಂದಾಗಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಸೇರಿದಂತೆ ಹಲವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಪೇಪರ್ ಟೌನ್ ರಾಮಮಂದಿರದ ಕಲ್ಯಾಣ ಮಂದಿರದಲ್ಲಿ ಇರಿಸಿದ್ದರು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೆಲ ಕಾರ್ಮಿಕರು ಪೆಂಡಾಲ್ ಒಳಗೆ ನಿಂತು ಘೋಷಣೆ ಕಾರ್ಖಾನೆಯನ್ನು ಉಳಿಸಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸಪಟ್ಟರು.
ಇದನ್ನೂ ಓದಿ : ಮತ್ತೆ ಭುಗಿಲೆದ್ದ ಟಿಪ್ಪು-ಸಾವರ್ಕರ್ ವಿವಾದ: ಯಾದಗಿರಿಯಲ್ಲಿ ನಿಷೇಧಾಜ್ಞೆ ಜಾರಿ, ಬಂಧನ