ಯೋಗವನ್ನು ಪ್ರಪಂಚಕ್ಕೆ ಪರಿಚಯಿಸಿದ ಕೀರ್ತಿ ಮೋದಿಯರಿಗೆ ಸಲ್ಲುತ್ತದೆ: ಶ್ರೀ ಸಿದ್ದಲಿಂಗ ಸ್ವಾಮೀಜಿ - etv bharat kannada
🎬 Watch Now: Feature Video
ತುಮಕೂರು: "ಭಾರತೀಯ ಪರಂಪರೆಯಲ್ಲಿ ಯೋಗಾಸನಕ್ಕೆ ವಿಶೇಷ ಮಹತ್ವವಿದೆ. ಕಳೆದ 9 ವರ್ಷಗಳಿಂದ ಯೋಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸ್ಥಾನ ಪಡೆದಿದೆ" ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಇಂದು ಸಿದ್ದಗಂಗಾ ಮಠದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮೂಲಕ ಯೋಗಾಸನವನ್ನು ಪ್ರಪಂಚಕ್ಕೆ ಪರಿಚಯಿಸಿಕೊಟ್ಟ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ" ಎಂದು ಹೇಳಿದರು.
"ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಂಡ ಮನುಷ್ಯ ಶ್ರೀಮಂತನಾಗಿರುತ್ತಾನೆ. ಪ್ರಸ್ತುತ ಸಮಾಜದಲ್ಲಿ ಹಣವಂತರು, ಆಸ್ತಿ ಇರುವವರು ಶ್ರೀಮಂತರಲ್ಲ. ಇದಕ್ಕೆ ಬದಲಾಗಿ ಉತ್ತಮ ಆರೋಗ್ಯ ಕಾಪಾಡಿಕೊಂಡಿರುವವರೇ ಶ್ರೀಮಂತರು. ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯನ್ನು ಬಹು ಹಿಂದಿನಿಂದಲೂ ನಾವು ಕೇಳುತ್ತಿದ್ದೇವೆ. ಹೀಗಾಗಿ ಉತ್ತಮ ಆಚಾರ- ವಿಚಾರ, ಆಹಾರ ಪದ್ಧತಿಯನ್ನು ಅಳವಡಿಸಿಕೊಂಡರೆ ಮಾತ್ರ ನಾವು ಆರೋಗ್ಯವಂತರಾಗಿರಲು ಸಾಧ್ಯ" ಎಂದು ಶ್ರೀಗಳು ಕಿವಿಮಾತು ಹೇಳಿದರು.
"ಪ್ರತಿಯೊಬ್ಬರಿಗೂ ಆರೋಗ್ಯ ಬೇಕು. ಆದರೆ ಆರೋಗ್ಯ ಸೂತ್ರಗಳನ್ನು ಪಾಲನೆ ಮಾಡುತ್ತಿಲ್ಲ. ಇದರಿಂದ ಆರೋಗ್ಯವಂತರಾಗಿರಲು ಹೇಗೆ ಸಾಧ್ಯ?. ಆರೋಗ್ಯಕರ ಜೀವನದಲ್ಲಿ ಯೋಗಾಸನ ಅತಿ ಮುಖ್ಯ. ಕ್ರಮಬದ್ಧವಾಗಿ ಯೋಗಾಸನವನ್ನು ಮಾಡುವುದರಿಂದ ಬದುಕಿನಲ್ಲಿ ಉತ್ತಮ ಆರೋಗ್ಯವನ್ನು ಪಡೆಯಬಹುದು" ಎಂದು ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.
ಇದನ್ನು ಓದಿ: Yoga Day.. ಭಾರತ ವಿಶ್ವಕ್ಕೆ ಯೋಗವನ್ನು ಕೊಡುಗೆಯಾಗಿ ನೀಡಿದೆ: ಡಾ.ವೀರೇಂದ್ರ ಹೆಗ್ಗಡೆ