ಮೈಸೂರು ವಿವಿ ಯುವ ಜನೋತ್ಸವ.. ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗಿ - etv bharata kannada
🎬 Watch Now: Feature Video
ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ನಡೆಯಲಿರುವ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಲಿದ್ದಾರೆ ಎಂದು ಕುಲಪತಿ ಪ್ರೊ ಜಿ ಹೇಮಂತ್ ಕುಮಾರ್ ತಿಳಿಸಿದ್ದಾರೆ. ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ವಿವಿಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಮಹಾರಾಜ ಮೈದಾನದಲ್ಲಿ ನಡೆಯಲಿರುವ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಯಶ್ ಪಾಲ್ಗೊಳಲ್ಲಿದ್ದು, ಯುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು.
Last Updated : Feb 3, 2023, 8:26 PM IST