Youth Congress protest: ಸಂಸದರ ಮನೆ ಮುತ್ತಿಗೆ ಯತ್ನ.. ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ
🎬 Watch Now: Feature Video
ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಅವರ ಶಿವಮೊಗ್ಗದ ಮನೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ಇಂದು ರಾಜ್ಯಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದರ ಮನೆ ಮುತ್ತಿಗೆ ಹಾಕುವ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೋಬನಗರದ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಯುವ ವಿನೋಬ ನಗರದಲ್ಲಿರುವ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಮುಂಜಾಗ್ರತ ಕ್ರಮವಾಗಿ ಸಂಸದರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ನೂಕಿ ಮುಂದೆ ಹೋಗಲು ಪ್ರಯತ್ನಿಸಿದರು.
ಈ ವೇಳೆ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು. ಆದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದರು. ಆಗ ಪೊಲೀಸರು ಎಲ್ಲರನ್ನು ಬಂಧಿಸಿ ತಮ್ಮ ವಾಹನದಲ್ಲಿ ಕರೆದುಕೊಂಡು ಹೋದರು. ಈ ವೇಳೆ ಪೊಲೀಸರು ಸುಮಾರು 60ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಡಿ ಎ ಆರ್ ಮೈದಾನಕ್ಕೆ ಕರೆದೊಯ್ದರು.
ಇದನ್ನೂ ಓದಿ: ಇಂದೇ ಪ್ರತಿಪಕ್ಷ ನಾಯಕರ ಹೆಸರು ಪ್ರಕಟ.. ಯಾರಿಗೇ ಅವಕಾಶ ನೀಡಿದರೂ ಸ್ವಾಗತ: ಬಿ ಎಸ್ ಯಡಿಯೂರಪ್ಪ