ಬೈಕ್ ಸ್ಟಂಟ್ ಮಾಡಲು ಹೋಗಿ ಡಿವೈಡರ್ಗೆ ಗುದ್ದಿದ ಯುವಕರು : ಭಯಾನಕ ವಿಡಿಯೋ ನೋಡಿ - ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ
🎬 Watch Now: Feature Video
ವಿಜಯನಗರ : ಬೈಕ್ ಸ್ಟಂಟ್ ಮಾಡಲು ಹೋಗಿ ಇಬ್ಬರು ಯುವಕರು ಬಿದ್ದು ಗಾಯಗೊಂಡಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣದ ಕೂಡ್ಲಿಗಿ ರಸ್ತೆಯಲ್ಲಿ ಇಂದು ನಡೆದಿದೆ. ಇಲ್ಲಿನ ಕೂಡ್ಲಗಿ ರಸ್ತೆಯಲ್ಲಿ ಇಬ್ಬರು ಯುವಕರು ಬೈಕ್ ವ್ಹೀಲಿಂಗ್ ಮಾಡುವಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಯುವಕರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಬಳಿಕ ತಕ್ಷಣ ಸ್ಥಳೀಯರು ಇಬ್ಬರು ಯುವಕರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಬೈಕ್ ವ್ಹೀಲಿಂಗ್ ಮಾಡಿ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಹಿನ್ನೆಲೆ ಯುವಕರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್ ಸ್ಟಂಟ್ ಮಾಡುವುದು, ವಾಹನಗಳನ್ನು ಅಡ್ಡಾದಿಡ್ಡಿ ಓಡಿಸುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇರುತ್ತವೆ. ಕೆಲವು ಸಂದರ್ಭಗಳಲ್ಲಿ ಈ ರೀತಿಯ ಹುಚ್ಚಾಟದಿಂದಾಗಿ ಸವಾರರು ಪ್ರಾಣವನ್ನು ಕಳೆದುಕೊಳ್ಳುತ್ತಾರೆ.
ಇದನ್ನೂ ಓದಿ : ಪರಿಸರ ಸಂರಕ್ಷಣೆಗಾಗಿ 'ರನ್ ಫಾರ್ ನೇಚರ್': ಸಾಲು ಮರದ ತಿಮ್ಮಕ್ಕ ಚಾಲನೆ