Russia Ukraine War: ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಉನ್ನತ ಮಟ್ಟದ ಸಭೆ

🎬 Watch Now: Feature Video

thumbnail

By

Published : Mar 5, 2022, 8:48 PM IST

Updated : Feb 3, 2023, 8:18 PM IST

ಎರಡು ದಿನಗಳ ಕಾಲ ಸ್ವಕ್ಷೇತ್ರ ವಾರಣಾಸಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ದೆಹಲಿಗೆ ವಾಪಸ್​ ಆಗಿದ್ದಾರೆ. ಇದರ ಬೆನ್ನಲ್ಲೇ ಸಚಿವರು ಹಾಗೂ ಪ್ರಮುಖ ಅಧಿಕಾರಿಗಳೊಂದಿಗೆ ಉಕ್ರೇನ್​ ವಿಚಾರವಾಗಿ ಉನ್ನತ ಮಟ್ಟದ ಸಭೆ ನಡೆಸಿದರು. ಉಕ್ರೇನ್​​ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆದುಕೊಂಡು ಬರುವ ಕಾರ್ಯ ನಡೆಯುತ್ತಿದ್ದು, ಇದೇ ವಿಚಾರವಾಗಿ ನಮೋ ಮತ್ತೊಮ್ಮೆ ಮಹತ್ವದ ಸಭೆಯಲ್ಲಿ ಭಾಗಿಯಾದರು. ಉಕ್ರೇನ್​​ನಿಂದ ಈವರೆಗೆ 13,300 ಭಾರತೀಯರನ್ನ ಕರೆತರಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ 13 ವಿಮಾನಗಳಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಾಪಸ್​ ಆಗಲಿದ್ದಾರೆಂದು ಕೇಂದ್ರ ಸರ್ಕಾರ ಈಗಾಗಲೇ ಮಾಹಿತಿ ಹಂಚಿಕೊಂಡಿದೆ.
Last Updated : Feb 3, 2023, 8:18 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.