ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ : ನಾಲ್ವರ ದುರ್ಮರಣ - ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ನಾಲ್ವರು ಸಾವು
🎬 Watch Now: Feature Video
ರಾಯಗಡ (ಮಹಾರಾಷ್ಟ್ರ): ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಗಾಯಾಳುಗಳನ್ನು ಎಂಜಿಎಂ ಕಾಮೋಥೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಎರಡು ಕಂಟೈನರ್‌ಗಳು, ಎರಡು ಕಾರುಗಳು, ಒಂದು ಟೆಂಪೋ ಮತ್ತು ಒಂದು ಟ್ರಕ್ ಸೇರಿದಂತೆ ಆರು ವಾಹನಗಳು ಜಖಂಗೊಂಡಿವೆ ಎಂದು ತಿಳಿದು ಬಂದಿದೆ.
Last Updated : Feb 3, 2023, 8:12 PM IST