'ಜೊತೆ ಜೊತೆಯಲಿ' ಧಾರಾವಾಹಿಯ ಲೇಡಿ ವಿಲನ್ ಮೀರಾ ಜೊತೆ ಮಾತುಕತೆ - ನಟಿ ಮಾನಸ
🎬 Watch Now: Feature Video
ಆರಂಭವಾಗಿ ಎರಡು ವಾರಗಳು ಕಳೆದಿದ್ದು ಇದೀಗ ನಂಬರ್ ಒನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ 'ಜೊತೆ ಜೊತೆಯಲಿ' ಧಾರಾವಾಹಿಯಲ್ಲಿ ಬರುವ ಪ್ರತಿಯೊಂದು ಪಾತ್ರವೂ ವಿಶೇಷವಾಗಿ ಗಮನ ಸೆಳೆಯುತ್ತಿದೆ. ಅದರಲ್ಲೂ ಲೇಡಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿರುವ ಮೀರಾ ಹೆಗ್ಡೆ ಅಲಿಯಾಸ್ ಮಾನಸ ಅವರಿಗೆ ಈಗಾಗಲೇ ಬಹಳ ಅಭಿಮಾನಿಗಳು ಸೃಷ್ಟಿಯಾಗಿದ್ದಾರೆ. 2014 ರಲ್ಲಿ ಮಿಸ್ ಕರ್ನಾಟಕ ಪ್ರಶಸ್ತಿ ಪಡೆದುಕೊಂಡಿದ್ದ ಮಾನಸ ಈಗಾಗಲೇ ಎರಡು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಆದರೂ 'ಜೊತೆ ಜೊತೆಯಲಿ' ಧಾರಾವಾಹಿ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿದೆ. ಧಾರಾವಾಹಿ ಬಗ್ಗೆ ತಮ್ಮ ಅನುಭವವನ್ನು ಮಾನಸ ಈಟಿವಿ ಭಾರತದ ಜೊತೆ ಹಂಚಿಕೊಂಡಿದ್ದಾರೆ.