ನೆರವು ಕಾರ್ಯಕ್ಕೆ ನಮ್ಮ ಜೊತೆ ಕೈಜೋಡಿಸಿ: ಮಾಧ್ಯಮಗಳಿಗೆ ಅಪ್ಪು ಮನವಿ - ಉತ್ತರ ಕರ್ನಾಟಕದ ನೆರೆ
🎬 Watch Now: Feature Video
ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ನೆರವು ನೀಡಲು ನಮ್ಮ ಜೊತೆ ಮಾಧ್ಯಮದವರು ಕೈಜೋಡಿಸಿದರೆ ಪರಿಹಾರ ಕಾರ್ಯ ಸುಲಭವಾಗುತ್ತದೆ ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮನವಿ ಮಾಡಿದ್ದಾರೆ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಂ ಅಭಿನಯದ ತ್ರಿವಿಕ್ರಮ ಚಿತ್ರದ ಮುಹೂರ್ತ ಕಾರ್ಯಕ್ರಮದ ವೇಳೆ ಅಪ್ಪು ಮಾಧ್ಯಮಗಳಿಗೆ ಈ ಮನವಿ ಮಾಡಿದ್ದಾರೆ. ಸಂಕಷ್ಟದಲ್ಲಿರುವವರಿಗೆ ಅಗತ್ಯ ವಸ್ತುಗಳು ಹಾಗೂ ಅಲ್ಲಿ ಯಾವ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತವೆ ಎಂಬ ಮಾಹಿತಿಯನ್ನು ಮಾಧ್ಯಮದವರು ನಮಗೆ ನೀಡಿದ್ರೆ ಒಳ್ಳೆಯದಾಗುತ್ತೆ ಎಂದಿದ್ದಾರೆ.