14 ಕ್ಷೇತ್ರಗಳಲ್ಲಿ ಮೈತ್ರಿಯ 10 ಅಭ್ಯರ್ಥಿಗಳು ಗೆಲ್ತಾರೆ: ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ - news kannada
🎬 Watch Now: Feature Video
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಜತೆ ಸೇರಿ ಸಿದ್ದರಾಮನ ಹುಂಡಿಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ವರುಣಾ ವಿಧಾನಸಭಾ ವ್ಯಾಪ್ತಿಯ ಸಿದ್ದರಾಮನ ಹುಂಡಿಯ ಸರ್ಕಾರಿ ಶಾಲೆಯಲ್ಲಿರುವ ಮತಗಟ್ಟೆಗೆ ತೆರಳಿ ಸಿದ್ದರಾಮಯ್ಯ ಮತದಾನ ಮಾಡಿದರು. ಇದಕ್ಕೂ ಮೊದಲು ತಮ್ಮ ಪುತ್ರನ ಆಗಮನಕ್ಕಾಗಿ ಸಿದ್ದರಾಮಯ್ಯ ಕೆಲ ನಿಮಿಷ ಮತಗಟ್ಟೆ ಕೇಂದ್ರದ ಹೊರಗಡೆಯೇ ಕಾದು ಕುಳಿತಿದ್ದರು. ವರುಣ ಶಾಸಕರಾಗಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಬಂದ ಮೇಲೆ ಒಟ್ಟಿಗೆ ತೆರಳಿ ಮತದಾನ ಮಾಡಿದರು. ತಮ್ಮ ಹಕ್ಕು ಚಲಾಯಿಸಿದ ಮೇಲೆ ಮಾತನಾಡಿದ ಅವರು, ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಇದರಲ್ಲಿ 10 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲೋ ವಿಶ್ವಾಸ ವ್ಯಕ್ತಪಡಿಸಿದರು.