ಕೊಪ್ಪಳದಲ್ಲಿ 10 ಹೊಸ ಸೋಂಕಿತ ಪ್ರಕರಣಗಳು ಪತ್ತೆ: ಗ್ರೌಂಡ್ ರಿಪೋರ್ಟ್ - Covid Report
🎬 Watch Now: Feature Video
ಕೊಪ್ಪಳದಲ್ಲಿ ನಿನ್ನೆ ಸಂಜೆಯ ವೇಳೆಗೆ ಮತ್ತೆ 10 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ಗಂಗಾವತಿ ತಾಲೂಕಿನ 4, ಕೊಪ್ಪಳ ಹಾಗೂ ಕುಷ್ಟಗಿ ತಾಲೂಕಿನಲ್ಲಿ ತಲಾ ಮೂರು ಪ್ರಕರಣಗಳು ಜುಲೈ7 ರ ಸಂಜೆಯ ವೇಳೆಗೆ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇಬ್ಬರು ಸಾವನಪ್ಪಿದ್ದು, 80 ಜನರು ಗುಣಮುಖರಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಸ್ವಯಂಪ್ರೇರಿತ ಲಾಕ್ಡೌನ್ ಮಾಡಲು ತೀರ್ಮಾನಿಸಿದ್ದಾರೆ. ನಗರದ ವ್ಯಾಪಾರಸ್ಥರು ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಇಂದಿನಿಂದ ಜುಲೈ25 ರವರೆಗೆ ಮಧ್ಯಾಹ್ನ 2 ಗಂಟೆಯಿಂದ ವ್ಯಾಪಾರ ವಹಿವಾಟು ಸ್ಥಗಿತಗೊಳ್ಳಲಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ..
Last Updated : Jul 8, 2020, 11:27 AM IST