ಬಾಲಕಿ ಮೇಲೆ ಅತ್ಯಾಚಾರ... ಆರೋಪಿಗೆ 10 ವರ್ಷ ಜೈಲು ಶಿಕ್ಷೆ - 10-year jail to Accused
🎬 Watch Now: Feature Video
ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ದಾವಣಗೆರೆ 2ನೇ ಹೆಚ್ಚುವರಿ ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿದೆ. ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ವಿಜಯ್ ಕುಮಾರ್ (25) ಎಂಬಾತ 14 ವರ್ಷದ ಬಾಲಕಿ ಮೇಲೆ ಅತ್ಯಚಾರವೆಸಗಿದ್ದ. ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ, ಪೋಕ್ಸೋ ಕಾಯ್ದೆಯಡಿ ನ್ಯಾಯಾದೀಶೆ ನಾಗಶ್ರೀ ಅವರು ಆರೋಪಿ ವಿಜಯ್ ಕುಮಾರ್ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
Last Updated : Sep 27, 2019, 10:05 AM IST