ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ 108 ಸೂರ್ಯ ನಮಸ್ಕಾರ ಕಾರ್ಯಕ್ರಮ - ಮೈಸೂರು ಶ್ರೀಕಂಠೇಶ್ವರ ಸ್ವಾಮಿ ದೇಗುಲ
🎬 Watch Now: Feature Video
ಮೈಸೂರು: ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 108 ಸಾಮೂಹಿಕ ಸೂರ್ಯ ನಮಸ್ಕಾರದಲ್ಲಿ 250ಕ್ಕೂ ಹೆಚ್ಚು ಭಕ್ತರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಾರ್ಯ ನಿರ್ವಾಹಣಾಧಿಕಾರಿ ಶಿವಕುಮಾರಯ್ಯ ಚಾಲನೆ ನೀಡಿದರು. ಯೋಗಗುರು ಪ್ರಕಾಶ್ ಅವರ ಮಾರ್ಗದರ್ಶನದಲ್ಲಿ 108 ಸೂರ್ಯನಮಸ್ಕಾರ ಮಾಡಲಾಯಿತು.