ಚಿಕ್ಕಮಗಳೂರಿನಲ್ಲಿ ಮೂವರಿಗೆ ಕೊರೊನಾ; ಸೋಂಕಿತರು ವಾಸವಿದ್ದ ಪ್ರದೇಶ ಸೀಲ್‌ಡೌನ್ - ಚಿಕ್ಕಮಗಳೂರು ಕೊರೊನಾ ಸುದ್ದಿ
🎬 Watch Now: Feature Video
ಕಾಫಿ ಜಿಲ್ಲೆಯಲ್ಲಿ ಇಂದು ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ. ಈವರೆಗೂ 45 ಜನ ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತರೀಕೆರೆ ತಾಲ್ಲೂಕಿನ ಅಜ್ಜಂಪುರ ಮೂಲದ ಓರ್ವ ವೃದ್ಧೆ ವೈರಸ್‌ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಸೋಂಕಿತರು ವಾಸ ಮಾಡುತ್ತಿದ್ದ ಪ್ರದೇಶವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್‌ಡೌನ್ ಮಾಡಿ, ಕಟ್ಟೆಚ್ಚರ ವಹಿಸಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 83 ಕ್ಕೆ ಏರಿಕೆಯಾಗಿದ್ದು, 37 ಸಕ್ರಿಯ ಪ್ರಕರಣಗಳಿವೆ.