ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: 4 ಲಕ್ಷ ರೂ. ಮೌಲ್ಯದ ಕೃಷಿ ಉಪಕರಣಗಳು ಭಸ್ಮ - 4 lakhs Agricultural tools destroyed due to accidental fire
🎬 Watch Now: Feature Video
ಚಿಕ್ಕಬಳ್ಳಾಪುರ: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಕೃಷಿ ಉತ್ಪನ್ನಗಳು, ಕೃಷಿ ಉಪಕರಣಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಡ್ಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಸೇರಿದ ಬಣವೆಗೆ ಬೆಂಕಿ ತಗುಲಿದ್ದು, ಹನಿ ನೀರಾವರಿ ಉಪಕರಣಗಳು, ಈರುಳ್ಳಿ ಘಟಕ ಸೇರಿದಂತೆ ಕೃಷಿ ಉಪಕರಣಗಳು ಸುಟ್ಟು ಕರಕಲಾಗಿವೆ. ಸುಮಾರು 4 ಲಕ್ಷಕ್ಕೂ ಅಧಿಕ ಮೌಲ್ಯದ ಕೃಷಿ ಉಪಕರಣಗಳು ಭಸ್ಮವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.