ರವಿ ಡಿ. ಚನ್ನಣ್ಣನವರ್ ಮಾರ್ಗದರ್ಶನದಲ್ಲಿ ದಾಳಿ: 40 ಕೆಜಿ ಗಾಂಜಾ ಬೆಳೆ ವಶ - ಅಕ್ರಮ ಗಾಂಜಾ ಬೆಳೆ ದಾಳಿ ನ್ಯೂಸ್
🎬 Watch Now: Feature Video
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೊಣ್ಣೆಬೈಚನಹಳ್ಳಿ ಗ್ರಾಮದ ತೋಟವೊಂದರಲ್ಲಿ ಗಾಂಜಾ ಬೆಳೆ ಬೆಳೆಯಲಾಗಿದ್ದು, ಈ ಕುರಿತು ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಸುಮಾರು 40 ಕೆಜಿ ಗಾಂಜಾ ಸೊಪ್ಪು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸಕ್ರಿ ಹಾಗೂ ಸೂಲಿಬೆಲೆ ಪೊಲೀಸ್ ಠಾಣೆಯ ಪಿಎಸ್ಐ ಮಧುಸೂದನ್ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ. ಆರೋಪಿಗಳು ತಲೆಮಾರೆಸಿಕೊಂಡಿದ್ದು, ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.