ಬಾಡಿಗೆ ಮನೆಗೆ ಸಾಮಗ್ರಿ ಸಾಗಿಸುತ್ತಿದ್ದ ವಾಹನಕ್ಕೆ ಏಕಾಏಕಿ ಬೆಂಕಿ - Fire to a vehicle carrying luggage
🎬 Watch Now: Feature Video
ಆನೇಕಲ್ (ಬೆಂಗಳೂರು): ಬಾಡಿಗೆ ಮನೆಗೆ ಸಾಮಗ್ರಿ ಸಾಗಿಸುತ್ತಿದ್ದ ವಾಹನಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಜಿಗಣಿ - ಹೊರ ವರ್ತುಲ ರಸ್ತೆಯಲ್ಲಿ ನಡೆದಿದೆ. ಚಾಲಕ ತಕ್ಷಣ ಟಾಟಾ ಏಸ್ ನಿಲ್ಲಿಸಿ, ಅದರಲ್ಲಿದ್ದ ಗ್ಯಾಸ್ ಸಿಲಿಂಡರ್ ಹೊರ ಹಾಕಿದ್ದಾನೆ. ಬಳಿಕ ಹತ್ತಿರದಲ್ಲೇ ಸಾಗುತ್ತಿದ್ದ ವಾಟರ್ ಟ್ಯಾಂಕರ್ ನೀರಿನಿಂದ ಬೆಂಕಿ ನಂದಿಸಿದ್ದು, ವಾಹನದಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.