ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಅದ್ಧೂರಿ ಆಚರಣೆ - latest gadag news
🎬 Watch Now: Feature Video
ಇಂದು ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ 64 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಮುನ್ಸಿಪಲ್ ಕಾಲೇಜಿನಿಂದ ಆರಂಭವಾದ ಮೆರವಣಿಗೆ ಜಿಲ್ಲಾ ಕ್ರೀಡಾಂಗಣದವರೆಗೂ ಸಾಗಿತು. ವಿವಿಧ ಕಲಾ ತಂಡಗಳು ಹಾಗೂ ಕರ್ನಾಟಕದ ಇತಿಹಾಸ ಸಾರುವ ಸ್ತಬ್ಧ ಚಿತ್ರಗಳು ಗಮನ ಸೆಳೆದವು. ಗಣಿ, ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ವಿವಿಧ ರಕ್ಷಣಾ ದಳಗಳಿಂದ ಆಕರ್ಷಣೆಯ ಪಥ ಸಂಚಲನದಿಂದ ಗೌರವ ರಕ್ಷೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಗದಗ ಜಿ.ಪಂ.ಅಧ್ಯಕ್ಷ ಕುಮಾರ ಸಿದ್ದಲಿಂಗೇಶ್ವರ ಹೆಚ್. ಪಾಟೀಲ್, ಶಾಸಕರಾದ ಹೆಚ್.ಕೆ. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಸಿಇಒ ಡಾ.ಆನಂದ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಷಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.