ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಅದ್ಧೂರಿ ಗಣರಾಜ್ಯೋತ್ಸವ! - udupi republic day
🎬 Watch Now: Feature Video
ಉಡುಪಿ ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ಮಾಡಿದರು. ಪೊಲೀಸ್ ಮತ್ತು ವಿವಿಧ ವಿದ್ಯಾರ್ಥಿ ತಂಡಗಳಿಂದ ನಡೆದ ಆಕರ್ಷಕ ಪಥ ಸಂಚಲನ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು. ಗಣರಾಜ್ಯೋತ್ಸವ ಸಂದೇಶ ನೀಡಿದ ಗೃಹ ಸಚಿವರು, ಈ ಹಿಂದೆ ಭಾರತದ ಮುಂದಿದ್ದ ಸವಾಲು ಬ್ರಿಟಿಷರನ್ನು ಹಿಮ್ಮೆಟ್ಟಿಸುವುದಾಗಿತ್ತು. ಆದರೀಗ ದೇಶದ ಮುಂದೆ ಹಲವು ಸವಾಲುಗಳಿವೆ. ಆ ಸವಾಲುಗಳನ್ನು ಭಾರತ ಒಂದೊಂದಾಗಿ ಎದುರಿಸಿ ಗೆಲ್ಲುತ್ತಿದೆ. ನಮ್ಮದು ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದೆ. ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಕೆಲಸ ಮಾಡಿದ ಮಹನೀಯರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.