ಶಿಡ್ಲಘಟ್ಟ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ - Shidlaghatta sub registrar's office

🎬 Watch Now: Feature Video

thumbnail

By

Published : Sep 7, 2019, 2:03 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದ ಉಪನೊಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ದಾಳಿ ನಡೆಸಿದ್ದು, ಉಪನೊಂದಣಾಧಿಕಾರಿ ಪ್ರಸಾದ್ ಕುಮಾರ್ ಹಾಗೂ ದ್ವಿತೀಯ ದರ್ಜೆ ಸಹಾಯಕ ಹರೀಶ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಜಮೀನು ನೊಂದಣಿಗಾಗಿ ತಾಲೂಕಿನ ಗಟಮಾರನಹಳ್ಳಿ ನಿವಾಸಿ ಮಧುಕುಮಾರ್ ಎಂಬವರ ಬಳಿ ಹತ್ತು ಸಾವಿರ ಮುಂಗಡ ಹಣವನ್ನು ಪಡೆದು, ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಎಸಿಬಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ದಾಳಿ ನಡೆಸಿದ ವೇಳೆ ಅಗತ್ಯಕ್ಕಿಂತಲೂ ಹೆಚ್ಚುವರಿ ನಗದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.