ಕೆಲಸ ನೀಡುವಂತೆ ವಾಡಿ ಸಿಮೆಂಟ್ ಕಾರ್ಖಾನೆ ಆಡಳಿತ ಮಂಡಳಿಗೆ ಕಾರ್ಮಿಕರಿಂದ ಒತ್ತಾಯ - ಎಸಿಸಿ ಸಿಮೆಂಟ್ ಕಾರ್ಖಾನೆ
🎬 Watch Now: Feature Video
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆ ತನ್ನ ಕಾರ್ಮಿಕರಿಗೆ ಸರಿಯಾಗಿ ಕೆಲಸ ನೀಡದೆ ವಂಚಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರದ ನಿರ್ದೇಶಗಳನ್ನು ಗಾಳಿಗೆ ತೂರಿರುವ ಕಾರ್ಖಾನೆಯ ಆಡಳಿತ ಮಂಡಳಿ, ಲಾಕ್ಡೌನ್ ನೆಪವೊಡ್ಡಿ ಕಾರ್ಮಿಕರಿಗೆ ಉದ್ಯೋಗದಿಂದ ವಂಚಿಸುತ್ತಿದೆ. ಸುಮಾರು 15 ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ವಂಚನೆಯಾಗುತ್ತಿರುವುದುನ್ನು ತಕ್ಷಣ ತಡೆದು ತಿಂಗಳಿಗೆ 25 ದಿನಗಳಾದರೂ ಕೆಲಸ ನೀಡುವಂತೆ ಆಡಳಿತ ಮಂಡಳಿಗೆ ಕಾರ್ಮಿಕರು ಆಗ್ರಹಿಸಿದ್ದಾರೆ.