ಸಿಂಧನೂರು: ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ - accidental fire in Gujari shop

🎬 Watch Now: Feature Video

thumbnail

By

Published : Feb 4, 2021, 9:22 AM IST

ರಾಯಚೂರು: ಆಕಸ್ಮಿಕ ಬೆಂಕಿ ತಗುಲಿ ಗುಜರಿ ಅಂಗಡಿ ಹೊತ್ತು ಉರಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿಂಧನೂರು ಪಟ್ಟಣದ ಕೋಟೆ ಏರಿಯಾದಲ್ಲಿ ಬುಧವಾರ ತಡರಾತ್ರಿ ಈ ಘಟ‌ನೆ ಸಂಭವಿಸಿದ್ದು, ಬೆಂಕಿ ಜ್ವಾಲೆಗೆ ಗುಜರಿ ಅಂಗಡಿಯಲ್ಲಿನ ವಸ್ತುಗಳು ಬೆಂಕಿಗಾಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದು, ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಸಿಂಧನೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.