ಲಾರಿಗೆ ಆಕಸ್ಮಿಕ ಬೆಂಕಿ... ಅಪಾರ ಪ್ರಮಾಣದ ಕೊಬ್ಬರಿ ಸುಟ್ಟು ಭಸ್ಮ - fire accident news in karnataka
🎬 Watch Now: Feature Video
ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಸಾವಿರ ರೂ. ಮೌಲ್ಯದ ಕೊಬ್ಬರಿ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಸುಮಾರು ಹತ್ತು ನಿಮಿಷಕ್ಕೂ ಹೆಚ್ಚು ಕಾಲ ಲಾರಿಯಲ್ಲಿದ್ದ ಕೊಬ್ಬರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆಗೆ ಕೊಬ್ಬರಿಯನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಲಾರಿಯ ಹಿಂಭಾಗ ಬೆಂಕಿ ಹೊತ್ತಿಕೊಂಡಿರುವ ವಿಷಯ ಲಾರಿ ಚಾಲಕನಿಗೆ ಗೊತ್ತಾಗಿಲ್ಲ. ನಂತರ ಸಾರ್ವಜನಿಕರು ಚಾಲಕನನ್ನು ಎಚ್ಚರಿಸಿದ ಮೇಲೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಓಡಿ ಬಂದಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.