ಖಾಸಗಿ ಬಸ್ಗೆ ಆಕಸ್ಮಿಕ ಬೆಂಕಿ.. ಮಹಿಳೆಗೆ ಗಂಭೀರ ಗಾಯ - woman seriously injured
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4434787-thumbnail-3x2-sow.jpg)
ತುಮಕೂರು: ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್, ತುಮಕೂರು ನಗರ ಹೊರವಲಯದ ಊರುಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹೊತ್ತಿ ಉರಿದಿದೆ. ಸುಮಾರು 30 ಮಂದಿ ಪ್ರಯಾಣಿಕರು ಈ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಖಾಸಗಿ ಬಸ್ ರಾಯಲ್ ಟ್ರಾವೆಲ್ಸ್ನ ಚಾಲಕ ಹಾಗೂ ನಿರ್ವಾಹಕರು ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಿಂದ ಓಡಿ ಹೋಗಿದ್ದಾರೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.