ಹೊಸಪೇಟೆ: ಡಿಕೆಶಿ ಭಾಗಿಯಾದ 'ಕೈ' ಕಾರ್ಯಕ್ರಮದಲ್ಲಿ ಕೊರೊನಾ ನಿಯಮಗಳ ಉಲ್ಲಂಘನೆ.. - ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
🎬 Watch Now: Feature Video
ಶ್ರೀ ಸಾಯಿ ರಂಗಲೀಲಾ ಕಲ್ಯಾಣ ಮಂಟಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗಮಿಸುವ ವೇಳೆ, ನೂಕು-ನುಗ್ಗಲು ಉಂಟಾಗಿ ಕಾರ್ಯಕರ್ತರು ಸಾಮಾಜಿಕ ಅಂತರ ಮರೆತಿದ್ದಾರೆ. ಕಾರ್ಯಕ್ರಮದಲ್ಲಿ ಕೊರೊನಾ ನಿಯಮಗಳು ಉಲ್ಲಂಘನೆಯಾಗಿದ್ದು, ಕಾರ್ಯಕ್ರಮದ ಮೂಲಕ ಕೊರೊನಾ ಹರಡುವ ಭಯ ಎದುರಾಗಿದೆ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ, ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಸೇರಿದಂತೆ ಜಿಲ್ಲಾ ಮುಖಂಡರು ಭಾಗಿಯಾಗಿದ್ದರು.