ಟಿ. ನರಸೀಪುರದಲ್ಲಿ ಶೂಟಿಂಗ್ನಲ್ಲಿರುವ ಜಗ್ಗೇಶ್: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಣೆ - refusal to respond to media
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10745255-thumbnail-3x2-bin.jpg)
ಮೈಸೂರು: ಶೂಟಿಂಗ್ನಲ್ಲಿ ಭಾಗವಹಿಸಿರುವ ನಟ ಜಗ್ಗೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಿನ್ನೆ ಸಿನಿಮಾ ಶೂಟಿಂಗ್ ಸ್ಥಳಕ್ಕೆ ದರ್ಶನ್ ಅಭಿಮಾನಿಗಳು ಆಗಮಿಸಿ, ಜಗ್ಗೇಶ್ ಅವರೊಂದಿಗೆ ಗಲಾಟೆ ನಡೆಸಿದ್ದರು. ಆ ನಂತರ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ಹೋಗಿದ್ದ ಜಗ್ಗೇಶ್ ಇಂದು ಟಿ. ನರಸೀಪುರ ತಾಲೂಕಿನ ರಂಗಸಮುದ್ರ ಬಳಿ ಶೂಟಿಂಗ್ನಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಿನ್ನೆಯ ಘಟನೆಯಿಂದ ಇಂದು ಶೂಟಿಂಗ್ ನಡೆಯುವ ಸ್ಥಳದಲ್ಲಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಶೂಟಿಂಗ್ ಸ್ಥಳಕ್ಕೆ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿದೆ.