ಮಂಡ್ಯ: ಬ್ರಾಹ್ಮಿ ಮುಹೂರ್ತದಲ್ಲಿ ವಿಜೃಂಭಣೆಯಿಂದ ಸಾಗಿದ ಆದಿಚುಂಚನಗಿರಿ ರಥೋತ್ಸವ - Mandya Carfest News

🎬 Watch Now: Feature Video

thumbnail

By

Published : Mar 28, 2021, 12:35 PM IST

ಮಂಡ್ಯ: ಆದಿಚುಂಚನಗಿರಿ ರಥೋತ್ಸವ ಬೆಳಗ್ಗೆ 4 ಗಂಟೆಯ ಬ್ರಾಹ್ಮಿ ಮುಹೂರ್ತದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ರಥೋತ್ಸವಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಸಹಸ್ರಾರು ಸಂಖ್ಯೆಯ ಭಕ್ತರು ಭಾಗವಹಿಸಿ ರಥಕ್ಕೆ ಹಣ್ಣು ಜವನ ಎಸೆದು ಭಕ್ತಿ ಸಮರ್ಪಿಸಿದರು. ಇನ್ನು ರಥೋತ್ಸವದ ಜತೆಯಲ್ಲಿ ಚುಂಚನಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಸಾಗಿತು. ಜಾತ್ರೆ ಹಾಗೂ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಈ ಸಂದರ್ಭ ಆದಿಚುಂಚನಗಿರಿ ಶಾಖಾಮಠದ ಎಲ್ಲಾ ಸ್ವಾಮೀಜಿಗಳು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ರಥೋತ್ಸವದಲ್ಲಿ ಪಾಲ್ಗೊಳ್ಳಲು ಶನಿವಾರ ಬೆಳಗ್ಗೆಯಿಂದಲೇ ಕ್ಷೇತ್ರದಲ್ಲಿ ಭಕ್ತರು ನೆರೆದಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.