ಪಿಂಚಣಿಗಾಗಿ ಅಗಸಗಿ ಗ್ರಾಮಸ್ಥರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ - ಪಿಂಚಣಿಗಾಗಿ ಅಗಸಗಿ ಗ್ರಾಮಸ್ಥರಿಂದ ಪ್ರತಿಭಟನೆ
🎬 Watch Now: Feature Video

ಬೆಳಗಾವಿ : ಪಿಂಚಣಿ ನೀಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಗಸಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಳೆದ 10 ತಿಂಗಳಿನಿಂದ ವೃದ್ಧಾಪ್ಯ, ಅಂಗವಿಕಲ ವೇತನ ಸೇರಿದಂತೆ ಯಾವುದೇ ಪಿಂಚಣಿ ಸಂದಾಯವಾಗಿಲ್ಲ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಆದಷ್ಟು ಬೇಗ ಪಿಂಚಣಿ ಹಣವನ್ನು ನೀಡಬೇಕು. ಜೊತೆಗೆ ಅಗಸಗಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಇಲಾಖೆಯಿಂದ ಒಬ್ಬ ಲೈನ್ಮ್ಯಾನ್ ನೇಮಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.