ರಾಜ್ಯದಲ್ಲಿ ಆಮ್ ಆದ್ಮಿ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲೂ ಮೊಹಲ್ಲಾ ಕ್ಲಿನಿಕ್: ಮನೀಶ್ ಸಿಸೋಡಿಯಾ ಭರವಸೆ - Delhi DCM
🎬 Watch Now: Feature Video
ಬೆಂಗಳೂರು: ದೆಹಲಿಯ ಆಮ್ ಆದ್ಮಿ ಪಕ್ಷ ಸರ್ಕಾರ ಮಾಡಿದಂತೆ ಎಲ್ಲಾ ರಾಜ್ಯ ಸರ್ಕಾರಗಳು ಸಹ ಸ್ಥಳೀಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅಭಿಪ್ರಾಯಪಟ್ಟಿದ್ದಾರೆ. ಈಟಿವಿ ಭಾರತ್ದೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷವು ಬೆಂಗಳೂರಿನಲ್ಲಿ ಮೊಹಲ್ಲಾ ಕ್ಲಿನಿಕ್ ಆರಂಭಿಸಿರುವ ಕಾರಣ ಎಂದರೆ ಜನರಿಗೆ ಇದರ ಮಹತ್ವ ಅರಿವಾಗಲಿ ಎಂಬುದಾಗಿದೆ. ಮುಂದಿನ ದಿನಗಳಲ್ಲಿ ಆಮ್ ಆದ್ಮಿ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ನಗರದಾದ್ಯಂತ ದೆಹಲಿ ಮಾದರಿಯಲ್ಲಿ ಮೊಹಲ್ಲಾ ಕ್ಲಿನಿಕ್ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.