ವೈದ್ಯರ ಮುಷ್ಕರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ - uttar kannada hospital bandh news
🎬 Watch Now: Feature Video
ಕಾರವಾರ: ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ನಡೆಸಿದ್ದಾರೆ ಎನ್ನಲಾದ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಬಂದ್ಗೆ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ಹಾಗೂ ಹೊನ್ನಾವರ ಭಾಗಗಳಲ್ಲಿ ಬಹುತೇಕ ಆಸ್ಪತ್ರೆಗಳು ಎಂದಿನಂತೆ ಹೊರ ರೋಗಿಗಳಿಗೆ ಚಿಕಿತ್ಸಾ ಸೇವೆ ನೀಡುತ್ತಿವೆ. ಬೆಳಗ್ಗೆಯಿಂದಲೂ ಕಾರವಾರದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಿದ್ದು, ಎಂದಿನಂತೆ ಆಸ್ಪತ್ರೆಗಳಲ್ಲಿ ಸೇವೆ ಮುಂದುವರೆದಿದೆ. ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯರಿಗೂ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರಿಂದ ಎಂದಿನಂತೆ ಜನಸಂದಣಿ ಕಂಡುಬಂತು.