ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು.. ವಿಡಿಯೋ - ಆಕಸ್ಮಿಕ ಬೆಂಕಿ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು...ವಿಡಿಯೋ
🎬 Watch Now: Feature Video
ಕೊಡಗು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೈಕಾಡು - ಎತ್ತುಗೋಡು ಮುಖ್ಯ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಕಡಂಗ ಗ್ರಾಮದ ರಶೀದ್ ಎಂಬುವರು ಮಾರುತಿ 800 ಕಾರಿನಲ್ಲಿ ರಾತ್ರಿ 11.30 ಸಮಯದಲ್ಲಿ ಎತ್ತುಗೋಡು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಕಾರಿನಲ್ಲಿದ್ದ ಮೂವರು ಕಾರನ್ನು ಬಿಟ್ಟು ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಚಾಲಕ ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಿಲ್ಲ. ಬೆಂಕಿಯ ಕೆನ್ನಾಲಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.