ಚಿಕ್ಕೋಡಿಯಲ್ಲಿ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿ - ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ
🎬 Watch Now: Feature Video
ಚಿಕ್ಕೋಡಿ: ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಲೋಕುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದ್ದು, ರೋಗಿ ಮತ್ತು ಸಿಬ್ಬಂದಿ ಸೇರಿ ಆರು ಜನರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಅಥಣಿಯಿಂದ ಮೀರಜ್ ಆಸ್ಪತ್ರೆಗೆ ತೆರಳುವಾಗ ಆ್ಯಂಬುಲೆನ್ಸ್ ಪಲ್ಟಿಯಾಗಿದ್ದು, ಬೇರೊಂದು ಆ್ಯಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಕಾಗವಾಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.