ಸರ್ಕಾರದ ಭರವಸೆ ಬಳಿಕ ಪ್ರತಿಭಟನೆ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು - Anganwadi activists news
🎬 Watch Now: Feature Video

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಒಗ್ಗಟ್ಟು ನೋಡಿ ಸರ್ಕಾರವೇ ಬೆಚ್ಚಿಬಿದ್ದಿತ್ತು. ರಾಜ್ಯದ ಮೂಲೆಮೂಲೆಯಿಂದ ಆಗಮಿಸಿದ್ದ ನಾಲ್ಕೈದು ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ರು. ಇವರ ಪ್ರತಿಭಟನೆಗೆ ಮಣಿದಿರುವ ಸರ್ಕಾರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಭೆ ಕರೆಯುವುದಾಗಿ ಹೇಳಿದೆ. ಹೀಗಾಗಿ ಸದ್ಯಕ್ಕೆ ಅವರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.