ಗುಂಡೂರು ಗ್ರಾಮದ ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ.. - ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5594118-thumbnail-3x2-kpl.jpg)
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಗುಂಡೂರು ಗ್ರಾಮದ ಬಳಿಯ ಹಳ್ಳದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಗುಂಡೂರು ಗ್ರಾಮದ ಬಳಿಯೇ ಇರುವ ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವುದನ್ನು ಸ್ಥಳೀಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಗ್ರಾಮಕ್ಕೆ ಹೊಂದಿಕೊಂಡಿರುವ ಈ ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವುದರಿಂದ ಜನರು ಭೀತಿಗೊಳಗಾಗಿದ್ದಾರೆ. ದಿನಂಪ್ರತಿ ಇದೆ ಹಳ್ಳ ದಾಟಿಕೊಂಡು ಗುಂಡೂರು ಗ್ರಾಮಸ್ಥರು ತಮ್ಮ ಹೊಲ ಗದ್ದೆಗಳಿಗೆ ತೆರಳುತ್ತಾರೆ. ಹಾಗಾಗಿ ಸಂಬಂಧಿಸಿದ ಅಧಿಕಾರಿಗಳು ಮೊಸಳೆಯನ್ನು ಅಲ್ಲಿಂದ ಬೇರೆ ಕಡೆ ಬಿಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
TAGGED:
Crocodile In Koppal