ಪ್ರತಿಭಟನೆ ವೇಳೆ ಅಹಿತಕರ ಘಟನೆ: ಕ್ಷಮೆಯಾಚಿಸಿದ ಶಾಸಕ ತಿಪ್ಪಾರೆಡ್ಡಿ ಬೆಂಬಲಿಗರು - Protest for minister post to MLA Thippareddy
🎬 Watch Now: Feature Video
ಚಿತ್ರದುರ್ಗ: ಬಿಜೆಪಿ ಶಾಸಕ ಜೆ.ಹೆಚ್.ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಬೆಂಬಲಿಗರು ಕ್ಷಮೆಯಾಚಿಸಿದ್ದಾರೆ. ಬಿಜೆಪಿ ಕಾರ್ಯದರ್ಶಿ ನವೀನ್ ಮಾತನಾಡಿ, ಆರು ಬಾರಿ ಶಾಸಕರಾಗಿರುವ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ಸಿಗದೆ ಇರುವುದು ಬೇಸರ ತಂದಿದೆ. ಈ ಕಾರಣದಿಂದ ಆಕ್ರೋಶಗೊಂಡು ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ಬೈಕ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ವಿ. ಆ ಘಟನೆಗೆ ತಿಪ್ಪಾರೆಡ್ಡಿ ಪರವಾಗಿ ನಾವು ಕ್ಷಮೆ ಕೇಳುತ್ತೇವೆ ಎಂದಿದ್ದಾರೆ.