ಅರಕೇರಾ ಗ್ರಾಮ ರಾಯಚೂರು ಜಿಲ್ಲೆಯ ನೂತನ ತಾಲೂಕಾಗಿ ಘೋಷಣೆ: ಪಟಾಕಿ ಹೊಡೆದು ಸಂಭ್ರಮಾಚರಣೆ - Raichur News Update
🎬 Watch Now: Feature Video
ರಾಯಚೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮವನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿ ಅನುಮೋದನೆ ನೀಡಿದ ಹಿನ್ನೆಲೆ ಗ್ರಾಮಸ್ಥರು, ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಯಿತು. ಗ್ರಾಮದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಗ್ರಾಮಸ್ಥರು, ಸಚಿವ ಸಂಪುಟದ ನಿರ್ಣಯ ಹೊರ ಬೀಳುತ್ತಿದ್ದಂತೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈಗ ಜಿಲ್ಲೆಯಲ್ಲಿ ಒಟ್ಟು 8 ತಾಲೂಕುಗಳಾಗಿವೆ.