ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - ಚಿತ್ರದುರ್ಗದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
🎬 Watch Now: Feature Video
ಚಿತ್ರದುರ್ಗ: ರಾಜ್ಯ ಸೇರಿದಂತೆ ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ನಡುವೆ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾರೆ. ನಗರದ ಜಿಲ್ಲಾ ಆರೋಗ್ಯಧಿಕಾರಿ ಡಾ. ಪಾಲಾಕ್ಷ ಅವರ ಕಚೇರಿ ಎದುರು ಜಮಾಯಿಸಿದ ಆಶಾ ಕಾರ್ಯಕರ್ತೆಯರು, ಕೊರೊನಾ ವಿರುದ್ಧ ಹೋರಾಟ ಮಾಡುವುದಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ನೀಡುವಂತೆ ಮನವಿ ಮಾಡಿದರು. ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಸಲಾಯಿತು.