ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ - ramanagara protest latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5624199-thumbnail-3x2-ramanagara.jpg)
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ರಾಮನಗರ ಜಿಲ್ಲೆಯ ಆಶಾ ಕಾರ್ಯಕರ್ತೆಯರು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣೆಗೆ ನಡೆಸಿದರು. ಪ್ರಮುಖವಾಗಿ ಎಂಸಿಟಿಎಸ್ ಪ್ರೋತ್ಸಾಹ ಧನವನ್ನು ಪಾವತಿಸುವ ಬಗ್ಗೆ ಇಲಾಖೆಯೂ ಭರವಸೆ ಕೊಟ್ಟಿತ್ತು. ಆದ್ರೆ ಪ್ರೋತ್ಸಾಹಧನವನ್ನು 15 ತಿಂಗಳಿಂದ ಪಾವತಿ ಮಾಡಿಲ್ಲ. ಕೂಡಲೇ ಕೊಡಬೇಕಾದ 15 ತಿಂಗಳ ಪ್ರೋತ್ಸಾಹ ಧನವನ್ನ ಪಾವತಿ ಮಾಡಬೇಕೆಂದು ಒತ್ತಾಯ ಮಾಡಿದರು. ಇನ್ನು ರಾಮನಗರದ ಕೋರ್ಟ್ ಆವರಣದಿಂದ ಜಿಲ್ಲಾ ಆರೋಗ್ಯಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಜಿಲ್ಲಾ ಡಿಎಚ್ಒಗೆ ಮನವಿ ಸಲ್ಲಿಸಿದರು. ಕೂಡಲೇ ಇದರ ಬಗ್ಗೆ ಕ್ರಮವಹಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.