ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಮುಂದುವರೆಯಲಿದೆ ’ಆಶಾ’ ಕಾರ್ಯಕರ್ತೆಯರ ಹೋರಾಟ - ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ
🎬 Watch Now: Feature Video
ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಎಐಯುಟಿಯುಸಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಭರವಸೆ ಮೇರೆಗೆ ತಾತ್ಕಾಲಿಕವಾಗಿ ರಾಜಧಾನಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸ್ಥಗಿತಗೊಳಿಸಲಾಗಿದ್ದು, ಆಯಾ ಜಿಲ್ಲಾ, ತಾಲೂಕುವಾರು ಪ್ರತಿಭಟನೆ, ಧರಣಿ ಮುಂದುವರೆಯಲಿದೆ ಎಂದು ಆಶಾ ಸಂಘಟನೆ ಪ್ರಧಾನ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಹೇಳಿದರು. 15 ತಿಂಗಳ ಪ್ರೋತ್ಸಾಹ ಧನ ನೀಡುವವರೆಗೂ ಕೆಲಸ ಮಾಡುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶ ನಾಗಲಕ್ಷ್ಮೀ ಈಟಿವಿ ಭಾರತ್ ಜೊತೆ ಮಾತನಾಡಿ ಸ್ಪಷ್ಟಪಡಿಸಿದರು.